ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಾಕಿದ ಆರೋಪದ ಮೇಲೆ ಯುವತಿಯನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಯುವತಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. 2025 ನೇ ಸಾಲಿನಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ ಗಳ ಹಂಚಿಕೆ ಕುರಿತಂತೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಯುವತಿಯನ್ನು ಬಂಧಿಸಿ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ.

