ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಲ್ಲಿ ಮಾರಕಾಸ್ತ್ರಗಳಿಂದ ಥಳಿಸಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಯುವತಿ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಲಾಗಿದೆ. ಚೇತನ್ ಎಂಬಾತ ಮಚ್ಚಿನಿಂದ ಯುವತಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ಕಕ್ಕೆಪದವು ನಿವಾಸಿ ಲಾವಣ್ಯ(21) ಕೊಲೆಯಾದ ಯುವತಿ. ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುತ್ತಿದ್ದ ಲಾವಣ್ಯ ಅವರನ್ನು ಓಡಿಲ್ನಾಳ ಗ್ರಾಮದ ಚೇತನ್ ಕೊಲೆ ಮಾಡಿದ್ದಾನೆ.
ಒನ್ ಸೈಡ್ ಲವ್ವರ್ ಚೇತನ್ ಹಾಡಹಗಲೇ ಬಸ್ ನಿಲ್ದಾಣದಲ್ಲಿ ಯುವತಿ ಕೊಲೆಗೈದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಾವಣ್ಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ. ಬಂಟ್ವಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಬಂಧನಕ್ಕೆ ಕ್ರಮಕೈಗೊಂಡಿದ್ದಾರೆ.

