ನವದೆಹಲಿ: ಕೆಲಸದ ಒತ್ತಡದಿಂದಾಗಿ ಅರ್ನ್ಸ್ಟ್ ಅಂಡ್ ಯಂಗ್ ಇಂಡಿಯಾದ 26 ವರ್ಷದ ಚಾರ್ಟರ್ಡ್ ಅಕೌಂಟೆಂಟ್ ಸಾವನ್ನಪ್ಪಿದ ಬಗ್ಗೆ ಭಾರಿ ಆಕ್ರೋಶದ ನಡುವೆ ಕೇಂದ್ರ ಕಾರ್ಮಿಕ ಸಚಿವಾಲಯವು ದೂರನ್ನು ಕೈಗೆತ್ತಿಕೊಂಡಿದೆ ಮತ್ತು ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಸಾವಿಗೆ ಕಾರಣವಾದ ಘಟನೆ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದೆ.
“ಅನ್ನಾ ಸೆಬಾಸ್ಟಿಯನ್ ಪೆರಾಯಿಲ್ ಅವರ ದುರಂತ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅಸುರಕ್ಷಿತ ಮತ್ತು ಶೋಷಕ ಕೆಲಸದ ವಾತಾವರಣದ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ನ್ಯಾಯವನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ ಮತ್ತು ಎಂದು ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.
Deeply saddened by the tragic loss of Anna Sebastian Perayil. A thorough investigation into the allegations of an unsafe and exploitative work environment is underway. We are committed to ensuring justice & @LabourMinistry has officially taken up the complaint.@mansukhmandviya https://t.co/1apsOm594d
— Shobha Karandlaje (@ShobhaBJP) September 19, 2024
ಟಾರ್ಗೆಟ್ ರೀಚ್ ಮಾಡಬೇಕು ಎಂಬ ಒತ್ತಡದಲ್ಲಿ ತನ್ನ ಮಗಳು ಹಗಲು-ರಾತ್ರಿ ಎನ್ನದೇ ಹಲವು ದಿನಗಳಿಂದ ನಿರಂತರ ಕೆಲಸ ಮಾಡುತ್ತಿದ್ದಳು. ಕೆಲಸದ ಒತ್ತಡದಿಂದಾಗಿ ಮಗಳು ಸಾವನ್ನಪ್ಪಿದ್ದಾಳೆ ಎಂದು ಕಂಬನಿ ಮಿಡಿದಿದ್ದಾರೆ.
2023ರಲ್ಲಿ ಯುವತಿ ಅನ್ನಾ, ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಮಾರ್ಚ್ 2024ರಲ್ಲಿ ಇವೈ ಪುಣೆಯಲ್ಲಿ ಕೆಲಸಕ್ಕೆ ಸೇರಿದ್ದರು. ಕೆಲಸಕ್ಕೆ ಸೇರಿದ ಕೇವಲ ನಾಲ್ಕು ತಿಂಗಳಲ್ಲಿ ಅನ್ನಾ ಸಾವನ್ನಪ್ಪಿದ್ದಾರೆ. ಇವೈ ಕಂಪನಿ ವಿರುದ್ಧ ಅನ್ನಾ ತಾಯಿ ದೂರು ದಾಖಲಿಸಿದ್ದಾರೆ. ಕಂಪನಿಗೆ ಸೇರಿದ ಕೂಡಲೇ ಕೆಲಸದ ಹೊರೆ, ಟಾರ್ಗೆಟ್ ಒತ್ತಡ, ಕೆಲಸದ ಒತ್ತಡ, ಆತಂಕ, ನಿದ್ರಾಹೀನತೆ ಅನುಭವಿಸುತ್ತಿದ್ದರು. ಆದರೆ ಕಠಿಣ ಪರಿಶ್ರಮ ಯಶಸ್ಸಿಗೆ ದಾರಿ ಎಂಬುದನ್ನು ನಂಬುತ್ತಾ ನಿರಂತರ ಕೆಲಸ ಮಾಡುತ್ತಿದ್ದ ಮಗಳು ಕೆಲಸದ ಒತ್ತಡದಿಂದ ಸಾವನ್ನಪ್ಪಿದ್ದಾಳೆ ಎಂದು ಅನಿತಾ ದೂರು ನೀಡಿದ್ದಾರೆ.