HomeKarnatakaಮದುವೆಯಾಗದೆ ಮಗುವಿಗೆ ಜನ್ಮ ನೀಡಿದ ಯುವತಿ: ಬಸ್ ನಿಲ್ದಾಣದಲ್ಲಿ ರಕ್ಷಿಸಿದ್ದ ಶಿಶು ಮತ್ತೆ ತಾಯಿ ಮಡಿಲಿಗೆ

ಮದುವೆಯಾಗದೆ ಮಗುವಿಗೆ ಜನ್ಮ ನೀಡಿದ ಯುವತಿ: ಬಸ್ ನಿಲ್ದಾಣದಲ್ಲಿ ರಕ್ಷಿಸಿದ್ದ ಶಿಶು ಮತ್ತೆ ತಾಯಿ ಮಡಿಲಿಗೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗವಟೂರು ಬಸ್ ನಿಲ್ದಾಣದಲ್ಲಿ ಜುಲೈ 5ರಂದು ರಾತ್ರಿ ಅನಾಥವಾಗಿ ಪತ್ತೆಯಾಗಿದ್ದ ಶಿಶುವಿನ ತಾಯಿಯನ್ನು ಪತ್ತೆ ಹಚ್ಚುವಲ್ಲಿ ರಿಪ್ಪನ್ ಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಯಾಣಿಕರ ತಂಗುದಾಣದಲ್ಲಿ ಅನಾಥವಾಗಿ ದೊರೆತಿದ್ದ ನವಜಾತ ಹೆಣ್ಣು ಶಿಶುವಿನ ತಾಯಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಗವಟೂರಿನ ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿತ್ತು. ಮಗು ಅಳುವುದನ್ನು ಗಮನಿಸಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಮಗುವನ್ನು ರಕ್ಷಣೆ ಮಾಡಲಾಗಿತ್ತು.

ರಿಪ್ಪನ್ ಪೇಟೆ ಪೊಲೀಸರು ಶಿಶು ಬಿಟ್ಟುಹೋದವರ ಪತ್ತೆಗೆ ಕ್ರಮ ಕೈಗೊಂಡಿದ್ದರು. ಸಾಗರದ 21 ವರ್ಷದ ಯುವತಿ ಶಿಶುವನ್ನು ಬಿಟ್ಟು ಹೋಗಿರುವುದು ಗೊತ್ತಾಗಿದೆ. ವರ್ಷದಿಂದ ಯುವಕನ ಪ್ರೀತಿಸುತ್ತಿದ್ದ ಯುವತಿ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿಯಾಗಿದ್ದು ಮನೆಯವರಿಗೆ ತಿಳಿಯದೆ ಗೌಪ್ಯವಾಗಿ ಮಗುವಿಗೆ ಜನ್ಮ ನೀಡಿದ್ದಳು. ಮದುವೆಯಾಗದೆ ಮಗು ಪಡೆದಿದ್ದು ಜನರ ಅಪವಾದಕ್ಕೆ ಹೆದರಿದ ಯುವತಿ ಬೈಕ್ ನಲ್ಲಿ ಬಂದು ಮಗುವನ್ನು ಬಿಟ್ಟು ಹೋಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 5ರ ರಾತ್ರಿ 7:30ಕ್ಕೆ ಕೈಚೀಲಲ್ಲಿ ನವಜಾತ ಶಿಶು ಮತ್ತು ಹಾಲಿನ ಬಾಟಲಿ ಇಟ್ಟು ತೆರಳಿದ್ದರು. ಭಾನುವಾರ ರಾತ್ರಿ ಮಗುವನ್ನು ರಕ್ಷಿಸಿದ್ದ ಪೊಲೀಸರು ಮೊಬೈಲ್ ಟವರ್ ಡಂಪ್ ನಂತಹ ತಾಂತ್ರಿಕ ಮಾಹಿತಿ ಆಧರಿಸಿ ಮಗುವಿನ ತಾಯಿಯನ್ನು ಪತ್ತೆ ಮಾಡಿ ಶಿಶುವನ್ನು ತಾಯಿಯ ಮಡಿಲಿಗೆ ಸೇರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular