SHOCKING : ಪಾರ್ಟಿಗೆ ಕರೆದು ಯುವತಿ ಮೇಲೆ ಸ್ನೇಹಿತ, ಆತನ ಸಹಚರರಿಂದ ಗ್ಯಾಂಗ್ ರೇಪ್ .!

ನವದೆಹಲಿ : ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ 24 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಪೊಲೀಸರು ಸಂತ್ರಸ್ತೆಯ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಯನ್ನೂ ನಡೆಸಲಾಗಿದೆ. ಆರೋಪಿಗಳನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ಯುವತಿಯನ್ನು ಸ್ನೇಹಿತ ತನ್ನ ಮನೆಗೆ ಪಾರ್ಟಿಗೆ ಆಹ್ವಾನಿಸಿದ ನಂತರ ಈ ಘಟನೆ ನಡೆದಿದೆ. ನಾನು ಸ್ನೇಹಿತನ ಮನೆಗೆ ಬಂದಾಗ, ಸ್ನೇಹಿತನ ಜೊತೆಗೆ ಮನೆಯಲ್ಲಿ ನಾಲ್ಕು ಪುರುಷರು ಇರುವುದನ್ನು ನೋಡಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ತನ್ನ ಪಾನೀಯದಲ್ಲಿ ಏನೋ ಬೆರೆಸಿದ್ದರಿಂದ ತಾನು ಪ್ರಜ್ಞೆ ತಪ್ಪಿದ್ದೇನೆ ಎಂದು ಆಕೆ ಹೇಳಿಕೊಂಡಿದ್ದಾಳೆ.

ನಂತರ ಆ ಗುಂಪು ತನ್ನನ್ನು ಸ್ನಾನಗೃಹಕ್ಕೆ ಕರೆದೊಯ್ದಿತು, ಅಲ್ಲಿ ಪುರುಷರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎಂದು ಆಕೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ. ಹಲ್ಲೆ ನಡೆದ ಸುಮಾರು 13-14 ಗಂಟೆಗಳ ನಂತರ ಸಂತ್ರಸ್ತೆ ತನ್ನ ಸಹೋದರಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ತನಿಖೆ ಹಂತದಲ್ಲಿದೆ ಮತ್ತು ಮುಂದಿನ ಕ್ರಮ ಕೈಗೊಳ್ಳುವ ಮೊದಲು ಎಲ್ಲಾ ಸಂಗತಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಘಟನೆ ಬಗ್ಗೆ ಎಲ್ಲಾದರೂ ಹೇಳಿದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ, ಎಫ್ಐಆರ್ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read