HomeLatest Newsಜಾತಿ ಮುಖ್ಯವಲ್ಲ, ಪ್ರೀತಿ ಮುಖ್ಯ ಎಂದು ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಜಾತಿ ಮುಖ್ಯವಲ್ಲ, ಪ್ರೀತಿ ಮುಖ್ಯ ಎಂದು ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವಿದೇಶಕ್ಕೆ ಪರಾರಿಯಾದ ಆರೋಪಿಯ ವಿರುದ್ಧ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಕತ್ರಿಗುಪ್ಪೆ ನಿವಾಸಿ 22 ವರ್ಷದ ಸಂತ್ರಸ್ತೆ ದೂರು ನೀಡಿದ್ದು, ಭರತ್ ಮತ್ತು ಆತನ ತಂದೆ ಸೂರ್ಯ ಪ್ರಸಾದ್, ತಾಯಿ ಅನುರಾಧ, ಅಕ್ಕ ರಂಜಿತಾ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ಮೂಲಕ ಭರತ್ ಸಂತ್ರಸ್ತೆಗೆ ಪರಿಚಿತನಾಗಿದ್ದು, ನಂತರ ಸ್ನೇಹಿತರಾಗಿದ್ದರು. ಬಳಿಕ ಪ್ರೀತಿಸುವುದಾಗಿ ಹೇಳಿದ್ದ ಭರತ್ ಮಾತಿಗೆ ಯುವತಿ ಒಪ್ಪದೇ ನಮ್ಮಿಬ್ಬರ ಜಾತಿ ಬೇರೆಯಾಗಿದ್ದು, ಮದುವೆಗೆ ಮನೆಯಲ್ಲಿ ಒಪ್ಪುವುದಿಲ್ಲ ಎಂದಿದ್ದಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನಗೆ ಜಾತಿ ಮುಖ್ಯವಲ್ಲ, ನಿನ್ನ ಪ್ರೀತಿ ಮುಖ್ಯ ಎಂದು ನಂಬಿಸಿದ್ದ ಆರೋಪಿ ಸಂತ್ರಸ್ತೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಂದು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದ. ನಂತರ ಆತನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ನಡೆಸಿದ್ದ. ಹಲವು ದಿನಗಳ ನಂತರ ಮನೆಯಲ್ಲಿ ಮದುವೆಗೆ ಒಪ್ಪುತ್ತಿಲ್ಲ, ಪೋಷಕರ ವಿರೋಧದ ನಡುವೆಯೂ ನಾನು ನಿನ್ನನ್ನು ಮದುವೆಯಾಗಲು ಸಿದ್ದ ಎಂದು ಹೇಳಿದ್ದ. ಹೀಗಾಗಿ ಮದುವೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಕಲ್ಯಾಣ ಮಂದಿರ ಬುಕ್ ಮಾಡಿ, ಪ್ರೀ ವೆಡ್ಡಿಂಗ್ ಶೂಟ್ ಕೂಡ ಮಾಡಿಸಲಾಗಿತ್ತು. ಈ ವೇಳೆಯಲ್ಲೇ ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆ. ನಮ್ಮ ಪೋಷಕರು ಭರತ್ ಮನೆಗೆ ಹೋಗಿ ವಿಚಾರಿಸಿದಾಗ ಅವಮಾನಿಸಿ ಜಾತಿ ನಿಂದನೆ ಮಾಡಿದ್ದಾರೆ. ಈ ಬಗ್ಗೆ ಕಾನೂನು ಕ್ರಮ ಜರುಗಿಸುವಂತೆ ಕೋರಿ ಯುವತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular