HomeKarnatakaBREAKING : ಮಂಗಳೂರಿನ ಫಾಲ್ಸ್'ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ; ಮೂವರು ಆರೋಪಿಗಳು ಅರೆಸ್ಟ್

BREAKING : ಮಂಗಳೂರಿನ ಫಾಲ್ಸ್’ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ; ಮೂವರು ಆರೋಪಿಗಳು ಅರೆಸ್ಟ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಫಾಲ್ಸ್ನಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರವಾಸದ ನೆಪದಲ್ಲಿ ಯುವತಿಯರನ್ನು ದಿಡುಪೆ ಫಾಲ್ಸ್‌ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಡಿ ಕಾಸರಗೋಡಿನ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಯುವತಿಯರ ಚೀರಾಟ ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಬಂಧಿತರನ್ನು ಕಾಸರಗೋಡು ಮೂಲದ ಅಬ್ದುಲ್ ಖಾದರ್, ಫೈಜಲ್ ಮತ್ತು ಉಸ್ಮಾನ್ ಸಲೀಂ ಎಂದು ಗುರುತಿಸಲಾಗಿದೆ.ಆರೋಪಿಗಳು ಅನ್ಯಕೋಮಿನ ಯುವತಿಯರನ್ನು ದಿಡುಪೆ ಫಾಲ್ಸ್ಗೆ ಕರೆದೊಯ್ದಿದ್ದರು. ಅಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದಾಗ, ಸಂತ್ರಸ್ತ ಯುವತಿ ಜೋರಾಗಿ ಚೀರಾಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿಯ ಕೂಗಾಟ ಕೇಳಿ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು, ಕಿರುಕುಳ ನೀಡುತ್ತಿದ್ದ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ಯುವತಿಯ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular