ಮಣಿಪುರ ಹಿಂಸಾಚಾರದ ಬಗ್ಗೆ ನಿಮ್ಮ ಮೌನ ಜನರ ಗಾಯದ ಮೇಲೆ ಉಪ್ಪು ಸವರಿದಂತೆ: ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನವಾಗಿರುವುದು ಅಲ್ಲಿನ ಜನರ ಗಾಯಕ್ಕೆ ಉಪ್ಪು ಸವರಿದಂತಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

3 ಮೇ 2023 ರಂದು ಮಣಿಪುರದಲ್ಲಿ ಮೊದಲು ಹಿಂಸಾಚಾರ ಪ್ರಾರಂಭವಾಯಿತು. ಕೇಂದ್ರ ಗೃಹ ಸಚಿವರನ್ನು ರಾಜ್ಯಕ್ಕೆ ಕಳುಹಿಸಲು ನೀವು ಸುಮಾರು ಒಂದು ತಿಂಗಳು ತೆಗೆದುಕೊಂಡಿದ್ದೀರಿ. ಗೃಹ ಸಚಿವರು ನಿರ್ಗಮಿಸಿದ 8 ದಿನಗಳ ನಂತರ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ ಎಂದು ಖರ್ಗೆ ದೂರಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರದ ಬಗ್ಗೆ ನಿಮ್ಮ ಮೌನವು ಅದರ ಜನರ ಗಾಯಗಳಿಗೆ ಉಪ್ಪು ಸವರುತ್ತಿದೆ. ಪ್ರಧಾನಿಯಾಗಿ, ನೀವು ಮಾಡಬಹುದಾದ ಕನಿಷ್ಠ ಕೆಲಸವೆಂದರೆ ಶಾಂತಿಗಾಗಿ ಮನವಿ ಮಾಡುವುದು. ನೀವು ಮಣಿಪುರಕ್ಕೆ ದ್ರೋಹ ಮಾಡಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read