ಚಿಕ್ಕಮಗಳೂರು : ಜೈನ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಥಿಪಂಜರಗಳು ಸಿಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗಳು ನಡೆದಿದ್ದವು. ಈ ಸಂಬಂಧ ಯುವಕ ಉಮೇಶ್ ಗೌಡ ಸೋಶಿಯಲ್ ಮೀಡಿಯಾದಲ್ಲಿ ಆಗಸ್ಟ್ 2 ರಂದು ಅಶ್ಲೀಲವಾಗಿ ಕಮೆಂಟ್ ಮಾಡಿದ್ದನು. ಜೈನ ಧರ್ಮದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದನು. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಉಮೇಶ್ ನನ್ನು ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.