ಉಡುಪಿ: ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾಟಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇಲೆ ಓರ್ವ ಯುವಕನನ್ನು ಕೋಟ ಪೊಲೀಸರು ಬಂಧಿಸಿದ್ದಾರೆ.
ಪಾಂಡೇಶ್ವರ ಗ್ರಾಮದ ಪ್ಯಾರಡೈಸ್ ಹೋಟೆಲ್ ಸಮೀಪ ಸೋಮವಾರ ಆರೋಪಿಯನ್ನು ಬಂಧಿಸಲಾಗಿದೆ. ಬ್ರಹ್ಮಾವರ ತಾಲೂಕಿನ ಬಾಳೆಕುದ್ರು ಗ್ರಾಮದ ಅಂಗಾರಕಟ್ಟೆ ನಿವಾಸಿ ಮನಿತ್(26) ಬಂಧಿತ ಆರೋಪಿ. ಈತನಿಂದ ಕ್ರಿಕೆಟ್ ಬೆಟ್ಟಿಂಗ್ ಗೆ ಬಳಕೆ ಮಾಡುತ್ತಿದ್ದ ಮೊಬೈಲ್ ಮತ್ತು ಬೆಟ್ಟಿಂಗ್ ಹಣ 800 ರೂ. ವಶಕ್ಕೆ ಪಡೆಯಲಾಗಿದೆ.
ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿದಂತೆ ಮೊಬೈಲ್ ನಲ್ಲಿರುವ ಆನ್ಲೈನ್ ಅಪ್ಲಿಕೇಶನ್ ಮೂಲಕ ಇತರರ ಜೊತೆ ಸೇರಿಕೊಂಡು ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೋಟ ಪೊಲೀಸ್ ಉಪನಿರೀಕ್ಷಕ ಆರ್. ಪ್ರವೀಣ್ ಕುಮಾರ್ ಸಿಬ್ಬಂದಿಯೊಂದಿಗೆ ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಟ್ಟಿಂಗ್ ನಲ್ಲಿ ತೊಡಗಿದ್ದ ಸಾರ್ವಜನಿಕರು ಸ್ಥಳದಿಂದ ಪರಾರಿ ಆಗಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

