ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶದ ಯುದ್ಧ ವಿಮಾನಗಳ ಕುರಿತಾಗಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ತುರುವಿಹಾಳ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಸಿಂಧನೂರು ತಾಲೂಕಿನ ಕೆ. ಹೊಸಹಳ್ಳಿ ಗ್ರಾಮದ ಅಜ್ಮೀರ್ ಬಂಧಿತ ಯುವಕ. ನಾಲ್ಕು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಮತ್ತು ರಫೇಲ್ ಯುದ್ಧ ವಿಮಾನಗಳ ಫೋಟೋಗಳನ್ನು ಹಾಕಿ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯುವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಜ್ಮೀರ್ ನನ್ನು ಬಂಧಿಸಿ ಕ್ರಮ ಜರುಗಿಸಿದ್ದಾರೆ.