ಅಕ್ರಮ ಸಂಬಂಧ ಆರೋಪದಡಿ ಹಲ್ಲೆಗೊಳಗಾದ ಯುವಕ ಸಾವು: ಇಬ್ಬರು ಅರೆಸ್ಟ್

ಬೀದರ್: ಅಕ್ರಮ ಸಂಬಂಧ ಆರೋಪದ ಮೇಲೆ ಹಲ್ಲೆಗೊಳಗಾಗಿದ್ದ ಯುವಕ ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಾಗನಪಲ್ಲಿ ಗ್ರಾಮದಲ್ಲಿ ಅಕ್ರಮ ಸಂಬಂಧ ಆರೋಪದ ಮೇಲೆ ಯುವಕನೊಬ್ಬನನ್ನು ಮನಬಂದಂತೆ ಥಳಿಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮಹಾರಾಷ್ಟ್ರದ ಗೌಣಗಾಂವ ಗ್ರಾಮದ ವಿಷ್ಣು(27) ಮೃತಪಟ್ಟ ಯುವಕ. ನಾಗನಪಲ್ಲಿ ಗ್ರಾಮದ ಯುವತಿಯೊಬ್ಬಳಿಗೆ ಮಹಾರಾಷ್ಟ್ರದ ಲಾತೂರು ಜಿಲ್ಲೆಯ ಸುಕಲ್ಲಿ ಗ್ರಾಮದಲ್ಲಿ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಹೈದರಾಬಾದ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿಷ್ಣು ಮತ್ತು ಆಕೆಯ ನಡುವೆ ಪರಿಚಯವಾಗಿ ಸಂಬಂಧ ಬೆಳೆದಿತ್ತು ಎನ್ನಲಾಗಿದೆ.

ಮೂರು ತಿಂಗಳಿಂದ ಮಹಿಳೆ ತನ್ನ ತವರು ಮನೆಯಾದ ನಾಗನಪಲ್ಲಿ ಗ್ರಾಮದಲ್ಲಿ ಬಂದು ನೆಲೆಸಿದ್ದಾಳೆ. ಅಕ್ಟೋಬರ್ 21ರಂದು ಮಂಗಳವಾರ ವಿಷ್ಣು ತನ್ನ ಇಬ್ಬರು ಸ್ನೇಹಿತರ ಜೊತೆಗೆ ಬೈಕ್ ಮೇಲೆ ನಾಗನಪಲ್ಲಿ ಗ್ರಾಮಕ್ಕೆ ಬಂದಿದ್ದಾನೆ. ಇವನನ್ನು ನೋಡಿದ ಮಹಿಳೆಯ ಸಹೋದರ ಮತ್ತು ತಂದೆ ಮನಬಂದಂತೆ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ವಿಷ್ಣುನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಎರಡು ದಿನದ ನಂತರ ವಿಷ್ಣು ಮೃತಪಟ್ಟಿದ್ದಾನೆ. ಆತನ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಮಗನನ್ನು ಕೊಲೆ ಮಾಡುವ ಉದ್ದೇಶದಿಂದ ಮಹಿಳೆಯ ತಂದೆ ಅಶೋಕ್ ಮತ್ತು ಸಹೋದರ ಗಜಾನನ ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read