HomeLatest Newsಗಣಪತಿ ಮೆರವಣಿಗೆಯಲ್ಲಿ ವಿದ್ಯುತ್ ಪ್ರವಹಿಸಿ ಯುವಕ ಸ್ಥಳದಲ್ಲೇ ಸಾವು

ಗಣಪತಿ ಮೆರವಣಿಗೆಯಲ್ಲಿ ವಿದ್ಯುತ್ ಪ್ರವಹಿಸಿ ಯುವಕ ಸ್ಥಳದಲ್ಲೇ ಸಾವು

ರಾಯಚೂರು: ರಾಯಚೂರು ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ಗಣಪತಿ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನರಸಿಂಹ(22) ಮೃತಪಟ್ಟ ಯುವಕ. ಹನುಮಾಪುರ ಸಮೀಪ ರಾಜೊಳ್ಳ ಬಂಡಾ ಕಾಲುವೆಯಲ್ಲಿ ಗಣಪತಿ ವಿಸರ್ಜಿಸಲು ಬೊಲೆರೋ ಪಿಕಪ್ ವಾಹನದಲ್ಲಿ ಮೆರವಣಿಗೆ ಸಾಗುತ್ತಿತ್ತು. ಗಣಪತಿಯನ್ನು ಹಿಡಿದು ಕುಳಿತಿದ್ದ ನರಸಿಂಹನಿಗೆ ವಿದ್ಯುತ್ ಸ್ಪರ್ಶಿಸಿದೆ. ಇದೇ ವೇಳೆ ವಾಹನದಲ್ಲಿದ್ದ ಯುವಕರು ಕೂಡಲೇ ಕೆಳಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಳೆಯ ನಡುವೆಯೇ ಗಣಪತಿ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಯರಗೇರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular