ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬ್ಯಾದನೆ ಗ್ರಾಮದ ಬಳಿ ಕಾಡಾನೆ ದಾಳಿಯಿಂದ ಯುವಕ ಸಾವನ್ನಪ್ಪಿದ್ದಾನೆ.
ಗುಜನಹಳ್ಳಿಯ ನಿವಾಸಿ ಅನಿಲ್(28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಅಣ್ಣಾಮಲೈ ಎಸ್ಟೇಟ್ ನಿಂದ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಸೊಂಡಿಲಿನಿಂದ ಅನಿಲ್ ನನ್ನು ಎತ್ತಿ ಬಿಸಾಕಿ ತುಳಿದು ಸಾಯಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.