HomeCrimeದಲಿತ ಯುವಕನ ಕೈ ಕಡಿದ ದುಷ್ಕರ್ಮಿಗಳು

ದಲಿತ ಯುವಕನ ಕೈ ಕಡಿದ ದುಷ್ಕರ್ಮಿಗಳು

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಯುವಕರ ಗುಂಪೊಂದು ಭಾನುವಾರ ರಾತ್ರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ ಅನೀಶ್ ಮೇಲೆ ಹಲ್ಲೆ ನಡೆಸಿ ಮುಂಗೈ ಕತ್ತರಿಸಿದೆ.

ದಲಿತರ ಕಾಲೋನಿಗೆ ನುಗ್ಗಿದ ಗುಂಪು ಅನೀಶ್ ಮೇಲೆ ಹಲ್ಲೆ ಮಾಡಿ ಕೈ ಕತ್ತರಿಸಿ ಹಾಕಿದೆ. ಅನೀಶ್ ಎಡಗೈ ತುಂಡಾಗಿದ್ದು, ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಮಾವ ಪಿ.ಎಲ್.ಡಿ. ಬ್ಯಾಂಕ್ ಉದ್ಯೋಗಿ ಲಕ್ಷ್ಮಣ ಮತ್ತು ಗೋವಿಂದರಾಜು ಅವರ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಗಾಯಗೊಂಡಿರುವ ಅವರನ್ನು ಕನಕಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯರು ಸೇರಿದಂತೆ 7 ಜನರ ಮೇಲೆ ಗುಂಪು ಹಲ್ಲೆ ನಡೆಸಿದ್ದು ಮನೆಯ ಮುಂದೆ ನಿಲ್ಲಿಸಿದ್ದ ಎರಡು ಆಟೋಗಳನ್ನು ಜಖಂಗೊಳಿಸಿದೆ.

ಹರ್ಷ, ಕರುಣೇಶ್, ರಾಹುಲ್, ಶಿವ, ಶಶಾಂಕ, ದರ್ಶನ್ ಸೇರಿದಂತೆ ಇತರರ ವಿರುದ್ಧ ಎಸ್ಸಿ ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಕೊಲೆ ಯತ್ನ ಆರೋಪದಡಿ ಕನಕಪುರ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದುವರೆಗೂ ಯಾರನ್ನು ಬಂಧಿಸಿಲ್ಲ. ಘಟನೆ ನಡೆದ ಗ್ರಾಮ ವಿಧಾನಪರಿಷತ್ ಸದಸ್ಯ ಎಸ್. ರವಿಯವರ ಸ್ವಗ್ರಾಮವಾಗಿದೆ. ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಎಸ್‌ಪಿ ಕಾರ್ತಿಕ್ ರೆಡ್ಡಿ ಗ್ರಾಮಕ್ಕೆ ನೀಡಿ ಮಾಹಿತಿ ಪಡೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular