HomeIndiaಪ್ರೀತಿ ನಿರಾಕರಿಸಿದ್ದಕ್ಕೆ ಗರಗಸದಿಂದ 10ನೇ ತರಗತಿ ವಿದ್ಯಾರ್ಥಿನಿಯ ಕುತ್ತು ಸೀಳಿದ ಯುವಕ: ಶಾಲೆಯಲ್ಲಿಯೇ ನಡೆದ ಘೋರ...

ಪ್ರೀತಿ ನಿರಾಕರಿಸಿದ್ದಕ್ಕೆ ಗರಗಸದಿಂದ 10ನೇ ತರಗತಿ ವಿದ್ಯಾರ್ಥಿನಿಯ ಕುತ್ತು ಸೀಳಿದ ಯುವಕ: ಶಾಲೆಯಲ್ಲಿಯೇ ನಡೆದ ಘೋರ ಘಟನೆ

ಹೈದರಾಬಾದ್: ಪಾಗಲ್ ಪ್ರೇಮಿಯೊಬ್ಬ, ವಿದ್ಯಾರ್ಥಿನಿ ತನ್ನ ಪ್ರೀತಿ ನಿರಾಕರಿಸಿದ್ದಕ್ಕೆ ಶಾಲೆಗೆ ನುಗ್ಗಿ ಆಕೆಯ ಕತ್ತು ಸೀಳಿರುವ ಘೋರ ಘಟನೆ ಆಂಧ್ರಪ್ರದೆಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಪ್ತಾಡು ಮಂಡಲದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ತರಗತಿ ಕೊಠಡಿಯೊಳಗೇ ನುಗ್ಗಿದ ಯುವಕನೊಬ್ಬ ತನ್ನ ಪ್ರೀತಿಯನ್ನು ನಿರಾಕರಿಸಿದ 10ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಮರ ಕತ್ತರಿಸುವ ಗರಗಸದ ಮಷಿನ್​ನಿಂದ ಭೀಕರವಾಗಿ ದಾಳಿ ನಡೆಸಿ, ಆಕೆಯ ಕುತ್ತಿಗೆ ಸೀಳಲು ಯತ್ನಿಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಳಿಗೊಳಗಾದ ವಿದ್ಯಾರ್ಥಿನಿಯು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದು, ಆಕೆಯನ್ನು ಆಪತ್ರೆಗೆ ದಾಖಲಿಸಲಾಗಿದೆ. ಸದ್ಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಲೆಯಲ್ಲಿ ಕ್ಲಾಸ್ ನಡೆಯುತ್ತಿದ್ದಾಗಲೇ ಏಕಾಏಕಿ ಕೊಠಡಿಯೊಳಗೆ ನುಗ್ಗಿದ ಆರೋಪಿ, ನೇರವಾಗಿ ಬಾಲಕಿಯ ಬಳಿ ಹೋಗಿ ಆಕೆ ಮೇಲೆ ಹಲ್ಲೆ ನಡೆಸಿದ್ದಾನೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನೋಡನೋಡುತ್ತಿದ್ದಂತೆಯೇ ಮರ ಕತ್ತರಿಸುವ ಯಂತ್ರದಿಂದ ಆಕೆಯ ಮೇಲೆ ದಾಳಿ ಮಡಿದ್ದಾನೆ. ದಾಳಿಯ ಭೀಕರತೆಗೆ ಬಾಲಕಿಯ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಗಾಯಗಳಾಗಿದ್ದು, ಆಕೆ ರಕ್ತದ ಮಡುವಿನಲ್ಲಿ ಕುಸಿದುಬಿದ್ದಿದ್ದಾಳೆ.

ತರಗತಿಯಲ್ಲಿ ನಡೆದ ಈ ಭೀಕರ ದೃಶ್ಯದಿಂದಾಗಿ ಸಹಪಾಠಿಗಳು ಹಾಗೂ ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆಂಧ್ರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.

ಈ ವೇಳೆ ದಾಳಿಯನ್ನು ತಡೆಯಲು ಯತ್ನಿಸಿದ ಮತ್ತೊಬ್ಬ ವಿದ್ಯಾರ್ಥಿನಿಗೂ ಗಾಯಗಳಾಗಿವೆ. ಕೃತ್ಯ ಎಸಗಿದ ಬಳಿಕ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಬಿಟ್ಟು ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಧರ್ಮವೃಂದ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಹೇಮಂತ್‌ನನ್ನು ಬಂಧಿಸಿದ್ದಾರೆ. ಈತ ಸಂತ್ರಸ್ತೆ ವಿದ್ಯಾರ್ಥಿನಿಯ ದೂರದ ಸಂಬಂಧಿಯಾಗಿದ್ದು, ನಾಗಲೂರು ಮೂಲದವನೆಂದು ತಿಳಿದುಬಂದಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಹೇಮಂತ್ ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ. ತನ್ನಿಂದ ದೂರವಿರುವಂತೆ ಹಾಗೂ ಈ ವಿಷಯವನ್ನು ಹೆತ್ತವರಿಗೆ ತಿಳಿಸುವುದಾಗಿ ವಿದ್ಯಾರ್ಥಿನಿ ಆತನಿಗೆ ಎಚ್ಚರಿಕೆ ನೀಡಿದ್ದಳು. ಇದರಿಂದ ಆಕ್ರೋಶಗೊಂಡ ಆರೋಪಿ, ಶಾಲೆಯ ತರಗತಿಯೊಳಗೆ ನುಗ್ಗಿ ಹತ್ಯೆಗೆ ಯತ್ನಿಸಿದ್ದಾನೆ. ಶಾಲೆಯ ಆವರಣದಲ್ಲೇ ನಡೆದ ಈ ಘಟನೆಯಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ.

ಈ ಘಟನೆಯ ಕುರಿತು ತೀವ್ರ ದಿಗ್ಭ್ರಮೆ ಮತ್ತು ಆಕ್ರೋಶ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಸಂತ್ರಸ್ತೆಗೆ ಅತ್ಯುತ್ತಮ ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಚಂದ್ರಬಾಬು ನಾಯ್ಡು: “ರಾಪ್ತಾಡು ಶಾಲೆಯ ತರಗತಿಯಲ್ಲೇ 10ನೇ ತರಗತಿಯ ಬಾಲಕಿಯ ಮೇಲೆ ನಡೆದ ಈ ಬರ್ಬರ ದಾಳಿಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಶಾಲೆಗೆ ನುಗ್ಗಿ ಹೆಣ್ಣುಮಕ್ಕಳ ಮೇಲೆ ದಾಳಿ ಮಾಡುವ ರಾಕ್ಷಸರಿಗೆ ನಮ್ಮ ಸಮಾಜದಲ್ಲಿ ಜಾಗವಿಲ್ಲ. ಸಂತ್ರಸ್ತೆಯ ಚಿಕಿತ್ಸೆಯನ್ನು ನಾನು ಸ್ವತಃ ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಈ ಕೃತ್ಯ ಎಸಗಿದ ನರಾಧಮನಿಗೆ ಕಾನೂನಿನ ಅಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಪೊಲೀಸರಿಗೆ ಸ್ಪಷ್ಟ ಆದೇಶ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular