HomeKarnatakaಸೇನಾ ನೇಮಕಾತಿ ಪರೀಕ್ಷೆಯಲ್ಲಿ ಫೇಲಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ

ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಫೇಲಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ

ಚಿಕ್ಕಮಗಳೂರು: ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ.

23 ವರ್ಷದ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಹೇಳಲಾಗಿದೆ. ಭಾರತೀಯ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗದ ಕಾರಣ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಮಕಾತಿ ಪರೀಕ್ಷೆಯಲ್ಲಿ ಫೇಲ್ ಆಗಿರುವುದನ್ನು ಮನೆಯವರಿಗೆ ಹೇಳುವ ಧೈರ್ಯ ನನಗಿಲ್ಲ ಎಂದು ಅವರು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆನ್ನಲಾಗಿದೆ. ಕಾರ್ತಿಕ್ ಅವರಿಗೆ ತಾಯಿ ಮತ್ತು ಸಹೋದರ ಇದ್ದಾರೆ. ಪೊಲೀಸರು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular