HomeKarnatakaಒಳ ಉಡುಪು ಕಳವು, ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಅಪ್ಲೋಡ್: ಯುವಕ ಅರೆಸ್ಟ್

ಒಳ ಉಡುಪು ಕಳವು, ಮಹಿಳೆಯರ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಅಪ್ಲೋಡ್: ಯುವಕ ಅರೆಸ್ಟ್

ಬೆಳಗಾವಿ: ಯುವತಿಯರು, ಮಹಿಳೆಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಇನ್ಸ್ಟಾಗ್ರಾಮ್ ಗೆ ಅಪ್ಲೋಡ್ ಮಾಡುತ್ತಿದ್ದ ಯುವಕನನ್ನು ಬಂಧಿಸಲಾಗಿದೆ.

ಈ ರೀತಿ ವಿಕೃತಿ ಎಸಗುತ್ತಿರುವ ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಲೋಕುಳಿ ಗ್ರಾಮದ 100ಕ್ಕೂ ಅಧಿಕ ಮಹಿಳೆಯರು ಬೆಳಗಾವಿ ಜಿಲ್ಲೆ ಖಾನಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯರ ಪ್ರತಿಭಟನೆಯ ನಂತರ ಕ್ರಮ ಕೈಗೊಂಡ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಲೋಕುಳಿ ಗ್ರಾಮದ ಮಂಥನ ದಶರಥ ಪಾಟೀಲ್(22) ಬಂಧಿತ ಆರೋಪಿ. ಗ್ರಾಮದ ಮನೆಯ ಹಿತ್ತಲುಗಳಲ್ಲಿ ಒಣಗಲು ಹಾಕಿದ್ದ ಒಳ ಉಡುಪು ಕದಿಯುವುದು, ಅವುಗಳನ್ನು ಕತ್ತರಿಸಿ ಬೇರೆಯವರ ಮನೆ ಆವರಣದಲ್ಲಿ ಎಸೆಯುವುದು, ಗ್ರಾಮದ ಯುವತಿಯರು, ಮಹಿಳೆಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಜಾಲತಾಣಗಳಿಗೆ ಅಪ್ಲೋಡ್ ಮಾಡುತ್ತಿದ್ದ ಎಂದು ಮಂಥನ ವಿರುದ್ಧ ಮಹಿಳೆಯರು ದೂರು ದಾಖಲಿಸಿದ್ದಾರೆ. ಮಹಿಳೆಯರ ಪ್ರತಿಭಟನೆಯ ನಂತರ ಕ್ರಮ ಕೈಗೊಂಡ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular