HomeKarnatakaBIG BREAKING: ಕಾಂಗ್ರೆಸ್ ನಿಂದ ಐವರು ಯುವಕರಿಗೆ ಟಿಕೆಟ್: ಅರ್ಧದಷ್ಟು ಅಭ್ಯರ್ಥಿಗಳು 40 ವರ್ಷದೊಳಗಿನವರು: ಡಿಸಿಎಂ...

BIG BREAKING: ಕಾಂಗ್ರೆಸ್ ನಿಂದ ಐವರು ಯುವಕರಿಗೆ ಟಿಕೆಟ್: ಅರ್ಧದಷ್ಟು ಅಭ್ಯರ್ಥಿಗಳು 40 ವರ್ಷದೊಳಗಿನವರು: ಡಿಸಿಎಂ ಮಾಹಿತಿ

ನವದೆಹಲಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದ್ದು, ಈ ಬಾರಿ ಕಾಂಗ್ರೆಸ್ ನಿಂದ ಐವರು ಯುವಕರಿಗೆ ಟಿಕೆಟ್ ನೀಡಲಾಗುತ್ತಿದೆ.

ದೆಹಲಿಯಲ್ಲಿ ಈ ಕುರಿತಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್, ಈ ಬಾರಿ ಕಾಂಗ್ರೆಸ್ ನಿಂದ ಐವರು ಯುವಕರಿಗೆ ಟಿಕೆಟ್ ನೀಡಲಾಗಿದೆ. ವಿದ್ಯಾವಂತರು, ಹೊಸ ಮುಖಗಳಿಗೆ ಕಾಂಗ್ರೆಸ್ ಟಿಕೆಟ್ ನೀಡುತ್ತಿದ್ದೇವೆ. ಶೇಕಡ 50ರಷ್ಟು ಅಭ್ಯರ್ಥಿಗಳು 40 ವರ್ಷದೊಳಗಿನವರಾಗಿದ್ದಾರೆ ಎಂದರು.

ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದೇ ಪ್ರಕಟವಾಗಬಹುದು. ಈ ಬಾರಿ ಕಾಂಗ್ರೆಸ್ ನಿಂದ ಯುವಕರಿಗೆ, ವಿದ್ಯಾವಂತರಿಗೆ ಆದ್ಯತೆ ನೀಡಲಾಗಿದೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಗೆಲ್ಲಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular