ಮಲಗಿದ್ದಲ್ಲೇ ಯುವಕರಿಬ್ಬರು ಅನುಮಾನಾಸ್ಪದ ಸಾವು

ಹಾಸನ: ರಾತ್ರಿ ಊಟ ಮಾಡಿ ಮಲಗಿದ್ದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಹನುಮಂತಪುರದಲ್ಲಿ ನಡೆದಿದೆ.

ಕೂಲಿ ಕಾರ್ಮಿಕರಾದ ನವಾಬ್(24), ರಾಮಸಂಜೀವ್(30) ಮೃತಪಟ್ಟವರು. ಮೃತರು ಉತ್ತರ ಪ್ರದೇಶದ ನಯನಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಕೊಠಡಿಯಲ್ಲಿ ಮಲಗಿದ್ದ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಕೆಲಸ ಅರಸಿ ಗ್ರಾಮಕ್ಕೆ ಬಂದಿದ್ದ ಇಬ್ಬರು ಜ್ವರದಿಂದಾಗಿ ಕೆಲಸಕ್ಕೆ ರಜೆ ಹಾಕಿ ವಿಶ್ರಾಂತಿ ಪಡೆಯುತ್ತಿದ್ದರು. ರಾತ್ರಿ ಊಟ ಮಾಡಿ ಔಷಧ ಸೇವಿಸಿ ಮಲಗಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಅನುಮಾನಾಸ್ಪದವಾಗಿ ಇಬ್ಬರು ಯುವಕರು ಮೃತಪಟ್ಟಿದ್ದು, ಮೃತದೇಹಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read