ಆಧಾರ್, ಬಿಪಿಎಲ್ ಕಾರ್ಡ್ ಹೊಂದಿದ ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್

  ಮಡಿಕೇರಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತ 45 ದಿನಗಳ ಉಚಿತ ತರಬೇತಿಯು ಜುಲೈ 10 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆಯೊಂದಿಗೆ ಆಂಗ್ಲ ಭಾಷೆಯನ್ನು ಸಹ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read