HomeKarnatakaಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದ ಭಾಸ್ಕರ್ ರಾವ್

ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದ ಭಾಸ್ಕರ್ ರಾವ್

ಬೆಂಗಳೂರು: ಎಸ್ ಐಆರರ್ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 8 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಖ್ಯಾತ ಯೂಟ್ಯೂಬರ್​​ ಧ್ರುವ್ ರಾಠಿ ವಿಶೇಷ ಅತಿಥಿಯಾಗಿ​ ಭಾಗವಹಿಸಿದ್ದರು. ಇದೀಗ ಅದೇ ಯೂಟ್ಯೂಬರ್ ವಿರುದ್ಧ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಯೂಟ್ಯೂಬರ್ ಧ್ರುವ್ ರಾಠಿ ಅವರ ಪೌರತ್ವ ಮತ್ತು ವೀಸಾ ಸ್ಥಿತಿಗತಿ ಪರಿಶೀಲಿಸುವಂತೆ ಭಾಸ್ಕರ್ ರಾವ್ ಪತ್ರದಲ್ಲಿ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಧ್ರುವ್ ರಾಠಿ ಜರ್ಮನ್ ಪೌರತ್ವ ಹೊಂದಿದ್ದಾರೆ ಎಂಬ ವರದಿಗಳು ಬಂದಿದೆ. ಭಾರತಕ್ಕೆ ಯಾವ ವೀಸಾ ಅಥವಾ ಅನುಮತಿ ಪಡೆದು ಬಂದಿದ್ದಾರೆ ಅಂತ ಪರಿಶೀಲಿಸಬೇಕು. ವಿದೇಶಿಗರ ಕಾಯ್ದೆ, ವೀಸಾ ನಿಯಮಗಳು ಹಾಗೂ ವಲಸೆ ನಿಯಮಗಳು ಉಲ್ಲಂಘನೆಯಾಗಿವೆಯೇ ಎಂದು ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.

ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ವಿಶ್ಲೇಷಕ ಧ್ರುವ್ ರಾಠಿ ಅವರು ಅಪಾರ ಫಾಲೋವರ್ಸ್ ಹೊಂದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು.

ಧ್ರುವ್ ರಾಠಿ ಅವರ ವಿವಿಧ ಯೂಟ್ಯೂಬ್ ಚಾನೆಲ್‌ಗಳು ಒಟ್ಟಾರೆಯಾಗಿ 3.6 ಕೋಟಿಗೂ (36 Million) ಹೆಚ್ಚು ಫಾಲೋವರ್ಸ್​ ಹೊಂದಿದ್ದಾರೆ. ಭಾರತೀಯ ಮಾಧ್ಯಮಗಳ ಸತ್ಯಾಸತ್ಯತೆ ಪರಿಶೀಲನೆ, ಸರ್ಕಾರದ ನೀತಿಗಳ ವಿಮರ್ಶೆ ಮತ್ತು ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ ಬಗ್ಗೆ ವಿಡಿಯೋ ಮಾಡುತ್ತಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular