HomeLatest NewsBREAKING : ಯೂಟ್ಯೂಬರ್ ಎಂ.ಡಿ ಸಮೀರ್' ಗೆ ಸಂಕಷ್ಟ : ಮತ್ತೊಂದು ದೂರು ದಾಖಲು.!

BREAKING : ಯೂಟ್ಯೂಬರ್ ಎಂ.ಡಿ ಸಮೀರ್’ ಗೆ ಸಂಕಷ್ಟ : ಮತ್ತೊಂದು ದೂರು ದಾಖಲು.!

ಚಿಕ್ಕಮಗಳೂರು : ಯೂಟ್ಯೂಬರ್ ಎಂ.ಡಿ ಸಮೀರ್ ಗೆ ಸಂಕಷ್ಟ ಎದುರಾಗಿದ್ದು, ಮತ್ತೊಂದು ದೂರು ದಾಖಲಾಗಿದೆ. ವಿಶ್ವ ಹಿಂದೂ ಪರಿಷತ್ ಸದಸ್ಯ ಮಂಜು ಜೈನ್ ಎಂಬುವವರು ಚಿಕ್ಕಮಗಳೂರಿನ ಕಡೂರು ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ದಾ ಕೇಂದ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.

ನಿರೀಕ್ಷಣಾ ಜಾಮೀನು ಮಂಜೂರು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದೆ.

ಎಐ ವಿಡಿಯೋ ಸೃಷ್ಟಿಸಿ ಗಲಭೆಗೆ ಪ್ರಚೋದನೆ, ಅಪಪ್ರಚಾರ, ತಪ್ಪು ಮಾಹಿತಿ ಮೂಲಕ ಪ್ರಚೋದನಕಾರಿ ಹೇಳಿಕೆ ಆರೋಪದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಸಮೀರ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ನಡುವೆ ಆಗಸ್ಟ್ 19ರಂದು ಸಮೀರ್ ಎಂ.ಡಿ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮಿನುಗಾಗಿ ಅರ್ಜಿ ಸಲ್ಲಿದ್ದರು.ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಸಮೀರ್ ಎಂ.ಡಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಂಧನ ಭೀತಿಯಿಂದ ಸಮೀರ್ ಪಾರಾಗಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular