ಧಾರವಾಡ: ಯೂಟ್ಯೂಬರ್ ಕ್ವಾಜಾ ಅಲಿಯಾಸ್ ಮುಕಳೆಪ್ಪ ವಿವಾಹ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ನಿರಂತರ ಕಿರುಕುಳ ನೀಡಿತ್ತಿದ್ದಾರೆ ಎಂದು ಮುಕಳೆಪ್ಪ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ.
ನಿರಂತರ ಕಿರುಕುಳ ಹಿನ್ನೆಲೆಯಲ್ಲಿ ತಮಗೆ ರಕ್ಷನೆ ನೀಡುವಂತೆ ಕೋರಿ ಮುಕೆಳೆಪ್ಪ ಕುಟುಂಬ ಸದಸ್ಯರು ಪೊಲೀಸರ ಮೊರೆ ಹೋಗಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಯೂಟ್ಯೂಬ್ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಮುಕಳೆಪ್ಪ ತಂದೆ ಹನೀಫ್ ಹಾಗೂ ತಾಯಿ ಸಮರೀನ್ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮನವಿ ಮಾಡಿದ್ದು, ತಮಗೆ ರಕ್ಷಣೆ ನೀಡುವಂತೆಯೂ ಕೋರಿದ್ದಾರೆ.