HomeIndiaBig News; ಜಗನ್ ಸಹೋದರಿ ಶರ್ಮಿಳಾ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ?

Big News; ಜಗನ್ ಸಹೋದರಿ ಶರ್ಮಿಳಾ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ?

ಆಂಧ್ರ ಪ್ರದೇಶ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್.ಶರ್ಮಿಳಾ ರಾಜ್ಯಸಭೆಗೆ ಆಯ್ಕೆಯಾಗುವ ನಿರೀಕ್ಷೆ ಇದೆ. ಕರ್ನಾಟಕದಿಂದ ಅವರನ್ನು ಆಯ್ಕೆ ಮಾಡಲು ಹೈಕಮಾಂಡ್ ನಾಯಕರು ಚಿಂತನೆ ನಡೆಸುತ್ತಿದ್ದಾರೆ ಎಂಬುದು ಸದ್ಯದ ಅಪ್‌ಡೇಟ್.

ವೈ.ಎಸ್.ಶರ್ಮಿಳಾ ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ. 6 ದಿನಗಳ ಹಿಂದೆ ಅವರು ಲೋಕಸಭೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾಗಿದ್ದರು. ಆಂಧ್ರ ಪ್ರದೇಶ ರಾಜ್ಯದಲ್ಲಿ ಪಕ್ಷ ಸಂಘಟನೆ ಬಲಪಡಿಸಲು ಅವರನ್ನು ರಾಜ್ಯಸಭೆ ಸದಸ್ಯರಾಗಿ ಆಯ್ಕೆ ಮಾಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿವೆ.

ಆಂಧ್ರ ಪ್ರದೇಶದ ಎನ್‌ಡಿಎ ಸರ್ಕಾರದ ವಿರುದ್ಧ ವೈ.ಎಸ್.ಶರ್ಮಿಳಾ ಪಾದಯಾತ್ರೆಯನ್ನು ಆರಂಭಿಸುತ್ತಿದ್ದಾರೆ. ಈ ಕುರಿತು ರಾಹುಲ್ ಗಾಂಧಿ ಜೊತೆ ಚರ್ಚಿಸಲು ಭೇಟಿಯಾಗಿದ್ದರು. ಪಾದಯಾತ್ರೆಗೆ ಅವರನ್ನು ಸಹ ಆಹ್ವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಸಭೆಗೆ ಆಯ್ಕೆ?: ಆಂಧ್ರ ಪ್ರದೇಶ ರಾಜಕೀಯದಲ್ಲಿ ಸಕ್ರಿಯವಾಗಿರುವ ವೈ.ಎಸ್.ಶರ್ಮಿಳಾ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಏಪ್ರಿಲ್, ಮೇ ತಿಂಗಳಿನಲ್ಲಿ ಕರ್ನಾಟಕದ 4 ರಾಜ್ಯಸಭೆ ಸದಸ್ಯರ ಅವಧಿ ಮುಕ್ತಾಯವಾಗಲಿದೆ.

ಇವರಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸದಸ್ಯತ್ವವೂ ಅಂತ್ಯವಾಗಲಿದೆ. ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ಪ್ರತಿಪಕ್ಷ ನಾಯಕರಾದ ಕಾರಣ ಅವರನ್ನು ಪುನರ್ ಆಯ್ಕೆ ಮಾಡಬೇಕಿದೆ.

ಆದರೆ ಉಳಿದ ಸ್ಥಾನದಲ್ಲಿ ಒಂದಕ್ಕೆ ವೈ.ಎಸ್.ಶರ್ಮಿಳಾ ಆಯ್ಕೆ ಮಾಡಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ ಈ ಕುರಿತು ಯಾವುದೇ ಕಾಂಗ್ರೆಸ್ ನಾಯಕರು ಪ್ರತಿಕ್ರಿಯೆ ನೀಡಿಲ್ಲ.

ಹಲವು ದಿನಗಳ ಹಿಂದೆ ವೈ.ಎಸ್.ಶರ್ಮಿಳಾ ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಹೈಕಮಾಂಡ್ ನಾಯಕರ ಚಿಂತನೆ ಸದ್ಯಕ್ಕೆ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ವೈ.ಎಸ್.ಶರ್ಮಿಳಾ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ಮೋಹನ ರೆಡ್ಡಿ ಅವರ ಸಹೋದರಿ. ಆದರೆ ಅವರು ಸಹೋದರನ ಜೊತೆಗೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಜೊತೆ ಗುರುತಿಸಿಕೊಂಡಿಲ್ಲ.

ವೈ.ಎಸ್.ಶರ್ಮಿಳಾ ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ.  2024ರ ತೆಲಂಗಾಣ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಅವರ ಪಕ್ಷದ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗಳು ಹಬ್ಬಿದ್ದವು.

ಆದರೆ ವೈ.ಎಸ್.ಶರ್ಮಿಳಾ ಅವರು ಕಾಂಗ್ರೆಸ್ ಸೇರಿದ್ದರು ಮತ್ತು ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ ಜೊತೆ ವಿಲೀನಗೊಳಿಸಿದ್ದರು. ಕಾಂಗ್ರೆಸ್ ಅವರನ್ನು ಆಂಧ್ರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷರನ್ನಾಗಿ ಮಾಡಿದೆ.

ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಮ್ಮುಖದಲ್ಲಿ ವೈ.ಎಸ್.ಶರ್ಮಿಳಾ ಕಾಂಗ್ರೆಸ್ ಸೇರಿದ್ದರು. ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ವಿಲೀನಗೊಳಿಸುತ್ತೇನೆ. ಪಕ್ಷ ನೀಡಿದ ಯಾವುದೇ ಜವಾಬ್ದಾರಿಯನ್ನು ಪೂರೈಸುತ್ತೇನೆ ಎಂದು ಹೇಳಿದ್ದರು.

ಕರ್ನಾಟಕದ ವಿಧಾನಸಭೆಯಲ್ಲಿ 130 + ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಪಕ್ಷ 3 ರಾಜ್ಯಸಭೆ ಸೀಟುಗಳನ್ನು ಗೆಲ್ಲಲು ಸಾಧ್ಯವಿದೆ. ಆದ್ದರಿಂದ ಮಲ್ಲಿಕಾರ್ಜು ಖರ್ಗೆ ಹೊರತುಪಡಿಸಿ ಇನ್ನು  ಯಾವ-ಯಾವ ಅಭ್ಯರ್ಥಿಗಳನ್ನು ಪಕ್ಷ ಆಯ್ಕೆ ಮಾಡಲಿದೆ? ಎಂಬುದು ಈಗಿನ ಲೆಕ್ಕಾಚಾರವಾಗಿದೆ.

ಕರ್ನಾಟಕದ ಹೊರತಾದ ನಾಯಕರನ್ನು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆ ಮಾಡುವ ವಿಚಾರದಲ್ಲಿ ಈ ಹಿಂದೆ ಭಾರೀ ಚರ್ಚೆಗಳು ನಡೆದಿತ್ತು. ಆದ್ದರಿಂದ ಈಗ ಕಾಂಗ್ರೆಸ್ ಜನರ ವಿರೋಧ ಎದುರಿಸಿ ವೈ.ಎಸ್.ಶರ್ಮಿಳಾ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ಸಾಧ್ಯವೇ?, ಶರ್ಮಿಳಾ ರಾಷ್ಟ್ರ ರಾಜಕೀಯಕ್ಕೆ ಹೋಗಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular