HomeKarnatakaನೂತನ ಡಿಸಿಎಂ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ ಆಂಧ್ರ YSR ತೆಲಂಗಾಣ ಪಕ್ಷದ ಅಧ್ಯಕ್ಷೆ...

ನೂತನ ಡಿಸಿಎಂ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ ಆಂಧ್ರ YSR ತೆಲಂಗಾಣ ಪಕ್ಷದ ಅಧ್ಯಕ್ಷೆ ಶರ್ಮಿಳಾ

ನೂತನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನ ವೈಎಸ್ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಭೇಟಿ ಮಾಡಿದರು.

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಸೋದರಿ ಬೆಂಗಳೂರಿನಲ್ಲಿನ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಭೇಟಿ ಮಾಡಿ ಶುಭ ಕೋರಿದರು.

ಡಿ.ಕೆ. ಶಿವಕುಮಾರ್ ಅವರ ಕಚೇರಿಯ ಪ್ರಕಾರ ಇದು ಉಭಯ ನಾಯಕರ ನಡುವಿನ ಸೌಹಾರ್ದಯುತ ಭೇಟಿಯಾಗಿದ್ದು, ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ. ಡಿ.ಕೆ ಶಿವಕುಮಾರ್ ಆಂಧ್ರಪ್ರದೇಶದ ದಿವಂಗತ ಮುಖ್ಯಮಂತ್ರಿ ವೈಎಸ್‌ಆರ್ ರಾಜಶೇಖರ ರೆಡ್ಡಿ ಅವರ ಕಾಲದಿಂದಲೂ ಶರ್ಮಿಳಾ ರೆಡ್ಡಿ ಅವರ ಫ್ಯಾಮಿಲಿ ಫ್ರೆಂಡ್.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಶರ್ಮಿಳಾ ರೆಡ್ಡಿ ಉತ್ಸುಕರಾಗಿದ್ದಾರೆ ಮತ್ತು ಈ ನಿಟ್ಟಿನಲ್ಲಿ ಅವರು ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

For Latest News Updates, Join Our Whatsapp Community🚩
RELATED ARTICLES

Most Popular