HomeIndiaಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಸೋದರಿ, ಮಾಜಿ ಸಂಸದೆ ಶಾಂತಾ ಆಂಧ್ರದಲ್ಲಿ YSRP ಅಭ್ಯರ್ಥಿಯಾಗಿ...

ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಸೋದರಿ, ಮಾಜಿ ಸಂಸದೆ ಶಾಂತಾ ಆಂಧ್ರದಲ್ಲಿ YSRP ಅಭ್ಯರ್ಥಿಯಾಗಿ ಸ್ಪರ್ಧೆ

ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ YSRP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹಿಂದೂಪುರ ಲೋಕಸಭಾ ಕ್ಷೇತ್ರದಿಂದ ಜೆ. ಶಾಂತಾ ಸ್ಪರ್ಧಿಸಲಿದ್ದಾರೆ.

ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ. 2009ರ ಲೋಕಸಭೆ ಚುನಾವಣೆಯಲ್ಲಿ ಶಾಂತಾ ಜಯಗಳಿಸಿದ್ದರು. ಪ್ರಸ್ತುತ ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಸಹೋದರಿ ಶಾಂತಾ ಬಿಜೆಪಿಗೆ ಗುಡ್ ಬೈ ಹೇಳಿದ್ದರು. ಬಳ್ಳಾರಿಯಿಂದ ಆಂಧ್ರಕ್ಕೆ ಶಿಫ್ಟ್ ಆಗಿ ಹಿಂದೂಪುರದಲ್ಲಿ YSRP ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಮೇ 13 ರಂದು ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆಯ ಮತದಾನ ನಡೆಯಲಿದೆ.

ವೈ.ಎಸ್. ರಾಜಶೇಖರ ರೆಡ್ಡಿ ಸಮಾಧಿ ಬಳಿ ಆಂಧ್ರಪ್ರದೇಶ ಮುಖ್ಯಮಂತ್ರಿ, YSRP ಸಂಸ್ಥಾಪಕ ಜಗನ್ ಮೋಹನ್ ರೆಡ್ಡಿ ಟಿಕೆಟ್ ಘೋಷಣೆ ಮಾಡಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular