HomeKarnatakaಪದೇ ಪದೇ ಮಾತಾಡಿಸಿದ್ದಕ್ಕೆ ಯುವತಿ ಮನೆಯವರಿಂದ ಯುವಕನ ಕೊಲೆ

ಪದೇ ಪದೇ ಮಾತಾಡಿಸಿದ್ದಕ್ಕೆ ಯುವತಿ ಮನೆಯವರಿಂದ ಯುವಕನ ಕೊಲೆ

ಚಿತ್ರದುರ್ಗ: ಪದೇ ಪದೇ ಯುವತಿಯನ್ನು ಮಾತನಾಡಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ನಾಗನಾಯ್ಕನ ಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಮನೋಜ್ ನಾಯ್ಕ(23) ಕೊಲೆಯಾದ ಯುವಕ. ಅದೇ ಗ್ರಾಮದ ಯುವತಿಯನ್ನು ಹಲವು ದಿನಗಳಿಂದ ಮಾತನಾಡಿಸುತ್ತಿದ್ದ. ಇದನ್ನು ಗಮನಿಸಿದ ಯುವತಿಯ ಪೋಷಕರು ಪುತ್ರಿಯನ್ನು ಮಾತನಾಡಿಸಿದಂತೆ ಮನೋಜ್ ಗೆ ಎಚ್ಚರಿಕೆ ನೀಡಿದ್ದರು. ಆದರೂ, ಮಾತನಾಡುವುದನ್ನು ಮುಂದುವರೆಸಿದ್ದರಿಂದ ಆಕ್ರೋಶಗೊಂಡು ಚಾಕುವಿನಿಂದ ತಿವಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular