HomeKarnatakaಪದವೀಧರರಿಗೆ ಭರ್ಜರಿ ಸುದ್ದಿ: 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಮುಹೂರ್ತ ಫಿಕ್ಸ್: ಡಿ. 21ರಿಂದಲೇ ನೋಂದಣಿ

ಪದವೀಧರರಿಗೆ ಭರ್ಜರಿ ಸುದ್ದಿ: 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಮುಹೂರ್ತ ಫಿಕ್ಸ್: ಡಿ. 21ರಿಂದಲೇ ನೋಂದಣಿ

ಬೆಂಗಳೂರು: ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 21ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಜನವರಿಯಿಂದ 5 ಲಕ್ಷ ಪದವೀಧರರ ಖಾತೆಗಳಿಗೆ ಹಣ ಜಮೆಯಾಗಲಿದೆ.

ವೈದ್ಯಕೀಯ ಶಿಕ್ಷಣ, ಕೌಶಾಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ ‘ಯುವನಿಧಿ’ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು.  ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://twitter.com/S_PrakashPatil/status/1734519900956393887

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular