HomeKarnatakaಯುವನಿಧಿ ಯೋಜನೆ: ಫಲಾನುಭವಿಗಳಿಗೆ ತರಬೇತಿ ನೀಡಿ ಉದ್ಯೋಗ ಒದಗಿಸಲು ಸಿಎಂ ಸೂಚನೆ

ಯುವನಿಧಿ ಯೋಜನೆ: ಫಲಾನುಭವಿಗಳಿಗೆ ತರಬೇತಿ ನೀಡಿ ಉದ್ಯೋಗ ಒದಗಿಸಲು ಸಿಎಂ ಸೂಚನೆ

ಬೆಂಗಳೂರು: ಯುವ ನಿಧಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕೈಗಾರಿಕೋದ್ಯಮಗಳಲ್ಲಿ ಬೇಡಿಕೆಗೆ ಅನುಗುಣವಾದ ತರಬೇತಿ ನೀಡಿ ಉದ್ಯೋಗ ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒಗಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯುವನಿಧಿ ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆ ಎರಡು ವರ್ಷ ಮಾತ್ರ ನೀಡುವ ಕಾರಣ, ಅಷ್ಟರೊಳಗೆ ಅವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಉದ್ಯೋಗ ಪಡೆಯಲು ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.

ಕಲಿಕೆ ಜೊತೆ ಕೌಶಲ್ಯ ಯೋಜನೆಯಡಿ ಕಲಿಯುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಅವರಿಗೆ ಹೆಚ್ಚಿನ ಉದ್ಯೋಗವಾಕಾಶ ಕಲ್ಪಿಸಲಾಗುತ್ತಿದೆ.
ಜಿಟಿಟಿಸಿ ಸಂಸ್ಥೆಗಳನ್ನು ಉನ್ನತೀಕರಿಸಿ, ಪ್ರವೇಶಾವಕಾಶವನ್ನು 3000 ದಿಂದ 5,000 ಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular