Yuvanidhi Scheme : ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : 5 ನೇ ಗ್ಯಾರಂಟಿ `ಯುವನಿಧಿ’ ಜಾರಿ ಬಗ್ಗೆ ಸಿಎಂ ಘೋಷಣೆ

ಮೈಸೂರು : ರಾಜ್ಯ ಸರ್ಕಾರವು ಡಿಪ್ಲೋಮಾ, ಪದವೀಧರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.

ಮೈಸೂರು ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರದ 5 ನೇ ಗ್ಯಾರಂಟಿ ಯುವನಿಧಿಯನ್ನು ಮುಂಬರುವ ಜನವರಿಯಲ್ಲಿ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನಾಡಿನ ಸಂಪತ್ತು, ಅಧಿಕಾರ ಎಲ್ಲರಿಗೂ ಹಂಚಿಕೆಯಾಗಬೇಕು. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು. ಇದನ್ನೇ ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು 5 ಗ್ಯಾರಂಟಿಗಳ ಪೈಕಿ ಈಗಾಗಲೇ 4 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು, ಜನವರಿಯಲ್ಲಿ 5 ನೇ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ.  ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read