HomeKarnatakaʻಯುವನಿಧಿʼ ಯೋಜನೆ ನೋಂದಣಿಗೆ ಚಾಲನೆ : ಜ. 12 ರಂದು ಖಾತೆಗೆ ಹಣ ಜಮಾ

ʻಯುವನಿಧಿʼ ಯೋಜನೆ ನೋಂದಣಿಗೆ ಚಾಲನೆ : ಜ. 12 ರಂದು ಖಾತೆಗೆ ಹಣ ಜಮಾ

ಬೆಂಗಳೂರು :  ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ.

ಈ ಯೋಜನೆಯಡಿಯಲ್ಲಿ ಪದವೀಧರರರು, ಡಿಪ್ಲೋಮಾ ತೇರ್ಗಡೆಯಾದವರು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿ, 2023 ತೇರ್ಗಡೆಯಾದ ಮತ್ತು ಫಲಿತಾಂಶ ಪ್ರಕಟಗೊಂಡ 180 ದಿವಸದ ಒಳಗಡೆ ಕೆಲಸ ದೊರೆಯದ ನಿರುದ್ಯೋಗಿ ಅರ್ಹ ಅಭ್ಯರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವನಿಧಿ ಯೋಜನೇಯ ನೋಂದಣಿ ಪ್ರಕ್ರಿಯೆಯು ಡಿ.26 ರಿಂದ ಆರಂಭವಾಗಿದೆ. ಈ  ಯುವನಿಧಿ ಯೋಜನೆಗೆ ನೋಂದಣಿಯಾದ ಪದವೀಧರರಿಗೆ ರೂ. 3.000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ. 1.500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಅಗತ್ಯವಾದ ಎಲ್ಲ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಮುಂಚಿತವಾಗಿ  ತಾತ್ಕಾಲಿಕ ಪದವಿ ಹಾಗೂ ಡಿಪ್ಲೋಮಾ ಪ್ರಮಾಣ ಪತ್ರ ಪಡೆದು 180 ದಿನಗಳು ಪೂರ್ಣಗೊಳ್ಳುವ ಮುಂಚೆ ಅರ್ಜಿ ಸಲ್ಲಿಸತಕ್ಕದ್ದು, 180 ದಿನಗಳ ನಂತರ ಸೌಲಭ್ಯವನ್ನು ನೀಡಲಾಗುವುದು. ಅಭ್ಯರ್ಥಿಯು ನಿರುದ್ಯೋಗಿ ಎಂದು ದೃಢೀಕರಿಸಬೇಕು ಮತ್ತು ಘೋಷಣೆಯನ್ನು  ಸಲ್ಲಿಸಬೇಕು. ಉದ್ಯೋಗ ದೊರಕಿದ ನಂತರ ಅಭ್ಯರ್ಥಿಯು ತಕ್ಷಣವೇ ಮುಚ್ಚಳಿಕೆ ಪತ್ರ ನೀಡತಕ್ಕದ್ದು.

ನೋಂದಾಯಿತ ಅಭ್ಯರ್ಥಿ ವಿವರಗಳನ್ನು ಎನ್.ಎ. ಡಿ ಮೂಲಕ ಪರಿಶೀಲಿಸಲಾಗುವುದು. ಪದವಿ ಹಾಗೂ ಡಿಪೆÇ್ಲಮಾದ ಪ್ರಮಾಣ ಪತ್ರಗಳನ್ನು ಮ್ಯಾನುವೆಲ್ ಮೂಲಕ ಅಪೆÇ್ಲೀಡ್ ಮಾಡಿದರೆ, ಅಪ್ ಲೋಡ್ ಮಾಡಿದ ದಾಖಲೆಗಳ ವಿವರಗಳನ್ನು ಆಯಾ ವಿಶ್ವವಿದ್ಯಾಲಯದ  ಮೌಲ್ಯಮಾಪನ ಕುಲಸಚಿವರಿಗೆ  ರವಾನಿಸಲಾಗುವುದು,  ತಪ್ಪು ಘೋಷಣೆ ಅಥವಾ ಉದ್ಯೋಗ ಪಡೆದಿರುವುದನ್ನು ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ. ಪಾವತಿಸಿದ ಮೊತ್ತವನ್ನು ಕಾನೂನಿನ ಪ್ರಕಾರ ವಸೂಲಿ ಮಾಡಲಾಗುವುದು. ಯುವನಿಧಿ ಯೋಜನೆಯಡಿ ನೋಂದಾಯಿತ ಅಭ್ಯರ್ಥಿಗಳ ದತ್ತಾಂಶವನ್ನು ಪರಿಶೀಲನೆಗಾಗಿ ಕೌಶಲ್ಯ ಸಂಪರ್ಕ ಪೆÇೀರ್ಟಲ್‍ಗೆ ಲಭ್ಯವಿರುವ ದತ್ತಾಂಶದೊಂದಿಗೆ ವರ್ಗಾಯಿಸಲಾಗುವುದು.

ನಿರುದ್ಯೋಗಿಯಾಗಿರುವುದನ್ನು ನಿಗದಿತ ನಮೂನೆಯಲ್ಲಿ ಪ್ರತಿ ತಿಂಗಳ 25 ನೇ ತಾರೀಖು ಅಥವಾ ಅದಕ್ಕಿಂತ ಮೊದಲು ಆಧಾರ್ ಆಧಾರಿತ ಓ.ಟಿ.ಪಿ ಮೂಲಕ ಘೋಷಣೆ ಮಾಡತಕ್ಕದ್ದು. ಜನವರಿ 12 ರಂದು ಖಾತೆಗೆ ಹಣ ವರ್ಗಾವಣೆಯಾಗಲಿದೆ.

2023ರಲ್ಲಿ ಪದವಿ, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಸೇವಾಸಿಂಧು ಆನ್‍ಲೈನ್‍ನಲ್ಲಿ ನೋಂದಣಿಯಾಗಿ  ಸದುಪಯೋಗವನ್ನು ಪಡೆದುಕೊಳ್ಳ

For Latest News Updates, Join Our Whatsapp Community🚩
RELATED ARTICLES

Most Popular