HomeKarnataka3 ಸಾವಿರ ರೂ. ಭತ್ಯೆ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಸಿಎಂ ಸಿಹಿ ಸುದ್ದಿ: ಡಿಸೆಂಬರ್ ನಿಂದ ‘ಯುವನಿಧಿ’...

3 ಸಾವಿರ ರೂ. ಭತ್ಯೆ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಸಿಎಂ ಸಿಹಿ ಸುದ್ದಿ: ಡಿಸೆಂಬರ್ ನಿಂದ ‘ಯುವನಿಧಿ’ ಜಾರಿ

ಬೆಂಗಳೂರು: ಡಿಸೆಂಬರ್ ನಿಂದ ಯುವನಿಧಿ ಯೋಜನೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪದವಿ, ಡಿಪ್ಲೋಮಾ ಪದವಿ ಆದ ನಿರುದ್ಯೋಗಿಗಳಿಗೆ ಹಣ ಒದಗಿಸುವ ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವನಿಧಿ ಸ್ಕೀಂ ಡಿಸೆಂಬರ್ ನಿಂದ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಯುವನಿಧಿ ಸ್ಕೀಮ್ ಘೋಷಿಸಲಾಗಿತ್ತು. 2022 – 23ರಲ್ಲಿ ಪದವೀಧರರಾಗಿ ಹೊರಬಂದು ನಿರುದ್ಯೋಗಿಗಳಾಗಿದ್ದಲ್ಲಿ ಅವರಿಗೆ 3000 ರೂ. ಭತ್ಯೆ ನೀಡಲಾಗುವುದು. ಡಿಪ್ಲೋಮಾ ಪದವೀಧರರಿಗೆ 1500 ರೂ. ನೀಡಲಾಗುವುದು. ನಿರುದ್ಯೋಗಿಗಳಿಗೆ ಯುವನಿಧಿ ಯೋಜನೆ ಆಶಾದಾಯಕವಾಗಿದ್ದು, ಡಿಸೆಂಬರ್ ನಲ್ಲಿ ಆರಂಭಿಸಲಾಗುವುದು. ಇದರೊಂದಿಗೆ ಕೌಶಲ್ಯ ಇಲಾಖೆಯಿಂದ ತರಬೇತಿ ಕೊಡಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular