BIG NEWS : ಮಾಜಿ ಸಿಎಂ B.S ಯಡಿಯೂರಪ್ಪಗೆ Z ಕೆಟಗರಿ ಭದ್ರತೆ : ಏನಿದು ತಿಳಿಯಿರಿ

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ಒದಗಿಸಿದೆ.

ಬಿ.ಎಸ್. ಯಡಿಯೂರಪ್ಪ ಅವರಿಗೆ ಬೆದರಿಕೆ ಇರುವ ಬಗ್ಗೆ ಕೇಂದ್ರ ಇಂಟೆಲಿಜೆನ್ಸ್ ಬ್ಯೂರೋ ವರದಿ ನೀಡಿರುವ ಹಿನ್ನೆಲೆ ಬಿ.ಎಸ್.ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ಒದಗಿಸಿದೆ. ಇದು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರುತ್ತದೆ ಎಂದು ತಿಳಿದು ಬಂದಿದೆ.

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದು, ಹೀಗಾಗಿ ಇವರ ಹಿಂದೆ ಈಗ ಝಡ್ ಕೆಟಗರಿಯ ಭದ್ರತೆ ಇರಲಿದೆ.

ಏನಿದು Z ಕೆಟಗರಿ ಭದ್ರತೆ

ಯಾವುದೇ ಒಬ್ಬ ವ್ಯಕ್ತಿಯು ಝಡ್ ಭದ್ರತೆಯನ್ನು ಪಡೆಯುತ್ತಾರೆಂದರೆ ಅವರಿಗೆ ಒಟ್ಟು 22 ಸಿಬ್ಬಂದಿ ತಂಡ ರಕ್ಷಣೆ ನೀಡುತ್ತದೆ. ಈ ಭದ್ರತಾ ತಂಡದಲ್ಲಿ ಸಿವಿಲ್ ಪೊಲೀಸ್ ಸಿಬ್ಬಂದಿ ಮತ್ತು ಕನಿಷ್ಠ 4 ರಿಂದ 5 ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಇರುತ್ತಾರೆ.

ಹೆಚ್ಚುವರಿಯಾಗಿ 10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್ಗಳನ್ನು ಅವರ ನಿವಾಸದಲ್ಲಿ ಇರಿಸಲಾಗುವುದು, ಆರು ವೈಯಕ್ತಿಕ ಭದ್ರತಾ ಅಧಿಕಾರಿಗಳು ದಿನದ 24 ಗಂಟೆ ಅವರನ್ನು ಕಾಯುತ್ತಿರುತ್ತಾರೆ. 12 ಸಶಸ್ತ್ರ ಬೆಂಗಾವಲು ಕಮಾಂಡೋಗಳನ್ನು ಮೂರು ಪಾಳಿಗಳಲ್ಲಿ ನಿಯೋಜಿಸಲಾಗುತ್ತಿದೆ. ನಿರಂತರ ಕಣ್ಗಾವಲು ಕಾಯ್ದುಕೊಳ್ಳಲು, ಇಬ್ಬರು ವೀಕ್ಷಕರನ್ನು ಶಿಫ್ಟ್ಗಳಲ್ಲಿ ನಿಯೋಜಿಸಲಾಗುತ್ತದೆ .

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read