HomeKarnatakaಚುನಾವಣೆ ಹೊತ್ತಲ್ಲೇ ಜಮೀರ್ ಅಹ್ಮದ್ ಗೆ ಸಂಕಷ್ಟ: ಆದಾಯ ಮೀರಿ ಆಸ್ತಿ ಗಳಿಕೆ FIR ಗೆ...

ಚುನಾವಣೆ ಹೊತ್ತಲ್ಲೇ ಜಮೀರ್ ಅಹ್ಮದ್ ಗೆ ಸಂಕಷ್ಟ: ಆದಾಯ ಮೀರಿ ಆಸ್ತಿ ಗಳಿಕೆ FIR ಗೆ ತಡೆಯಾಜ್ಞೆ ನಿರಾಕರಣೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹದಳ ದಾಖಲಿಸಿದ ಎಫ್ಐಆರ್ ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಎಸಿಬಿ ದಾಖಲಿಸಿದ ಎಫ್ಐಆರ್‌ ಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ವಜಾಗೊಳಿಸಿ ಆದೇಶ ನೀಡಿದೆ. ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಲೋಕಾಯುಕ್ತ ತನಿಖೆಯನ್ನು ಜಮೀರ್ ಅಹ್ಮದ್ ಖಾನ್ ಎದುರಿಸಬೇಕಿದೆ. ಆದಾಯ ಮೀರಿ 87 ಕೋಟಿ ರೂ. ಹೆಚ್ಚುವರಿ ಆಸ್ತಿ ಗಳಿಸಿದ ಆರೋಪದ ಮೇಲೆ 2022ರ ಮೇನಲ್ಲಿ ಎಸಿಬಿ ದಾಳಿ ನಡೆಸಿ ಕೇಸ್ ದಾಖಲಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular