HomeKarnatakaBIG NEWS: ಸಚಿವ ಜಮೀರ್ ಅಹ್ಮದ್ ಗೂ ಎದುರಾಯ್ತು ಸಂಕಷ್ಟ: ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ...

BIG NEWS: ಸಚಿವ ಜಮೀರ್ ಅಹ್ಮದ್ ಗೂ ಎದುರಾಯ್ತು ಸಂಕಷ್ಟ: ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಟಿ.ಜೆ. ಅಬ್ರಾಹಂ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ.

ಸಚಿವ ಜಮೀರ್ ಅಹ್ಮದ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ, ಹೈಕೋರ್ಟ್ ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಹಾಗೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ತನಿಖೆಗೆ ಆದೇಶ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ಜಮೀರ್ ಅಹ್ಮದ್, ಇದು ರಾಜಕೀಯ ಪ್ರೇರಿತ. ಕೋರ್ಟ್ ತೀರ್ಪು ರಾಜಕೀಯ ಆದೇಶ ಎಂದು ಲಘುವಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಸಂಕಷ್ಟ ಎದುರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular