HomeKarnatakaಮನೆ ಇಲ್ಲದ ಬಡವರಿಗೆ ಸಿಹಿ ಸುದ್ದಿ: ಉಚಿತವಾಗಿ ವಸತಿ ಸೌಲಭ್ಯ: ಫಲಾನುಭವಿಗಳಿಂದ ವಂತಿಗೆ ಪಡೆಯದೇ ಸರ್ಕಾರದಿಂದಲೇ...

ಮನೆ ಇಲ್ಲದ ಬಡವರಿಗೆ ಸಿಹಿ ಸುದ್ದಿ: ಉಚಿತವಾಗಿ ವಸತಿ ಸೌಲಭ್ಯ: ಫಲಾನುಭವಿಗಳಿಂದ ವಂತಿಗೆ ಪಡೆಯದೇ ಸರ್ಕಾರದಿಂದಲೇ ಸಂಪೂರ್ಣ ಮೊತ್ತ ಪಾವತಿ

ಬೆಂಗಳೂರು: ವಸತಿ ಯೋಜನೆಗಳಲ್ಲಿ ಸಂಪೂರ್ಣ ಮೊತ್ತವನ್ನು ಸರ್ಕಾರವೇ ಪಾವತಿಸಿ ಬಡವರಿಗೆ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತಾಗಿ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲು ಸಚಿವರು ಶುಕ್ರವಾರ ನಡೆದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಆಡಳಿತ ಮಂಡಳಿ ಸಭೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಬ್ಸಿಡಿ ಹೊರತುಪಡಿಸಿ ಉಳಿದ ಮೊತ್ತವನ್ನು ಸರ್ಕಾರವೇ ಭರಿಸುವಂತಾಗಬೇಕು. ಫಲಾನುಭವಿಗಳಿಂದ ಯಾವುದೇ ಹಣ ಪಡೆದುಕೊಳ್ಳದೆ ಮನೆ ನೀಡಿದಲ್ಲಿ ಬಡವರಿಗೆ ಅನುಕೂಲ ಕಲ್ಪಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ವಸತಿ ಯೋಜನೆಗಳಲ್ಲಿ ಫಲಾನುಭವಿಗಳ ವಂತಿಗೆ ಪಾವತಿಸದೆ ಅನುಷ್ಠಾನ ಕಷ್ಟವಾಗುತ್ತಿದ್ದು, ಹೀಗಾಗಿ ವಾರ್ಷಿಕ 3 ಲಕ್ಷ ಮನೆ ನಿರ್ಮಾಣ ಬದಲು ಒಂದೂವರೆ ಲಕ್ಷ ಮನೆ ನಿರ್ಮಾಣದ ಗುರಿ ಹಾಕಿಕೊಂಡು ಅವುಗಳನ್ನು ಪೂರ್ಣಗೊಳಿಸಿದರೆ ಯೋಜನೆ ಸಾಕಾರಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular