HomeKarnatakaBREAKING NEWS: ಸಚಿವ ಜಮೀರ್ ಅಹ್ಮದ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

BREAKING NEWS: ಸಚಿವ ಜಮೀರ್ ಅಹ್ಮದ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಡಾ ಹಗರಣದ ಕುರಿತ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ್ದ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ ಎಂದಿದ್ದ ಹೈಕೋರ್ಟ್ ತೀರ್ಪಿನ ಬಗ್ಗೆ ಸಚಿವ ಜಮೀರ್ ಅಹ್ಮದ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ನ್ಯಾಯಾಲಯದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಾರಣಕ್ಕೆ ಸಚಿವ ಜಮೀರ್ ಅಹ್ಮದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಅಡ್ವಕೇಟ್ ಜನರಲ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ.

ಸಚಿವ ಜಮೀರ್ ಅಹ್ಮದ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಸಚಿವರ ವಿರುದ್ಧ ಟಿ.ಜೆ ಅಬ್ರಾಹಂ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular