ಹಾಸನ : ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜಕೀಯ ಭವಿಷ್ಯದ ಕುರಿತಾಗಿ ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಹೊಸ ಭವಿಷ್ಯವೊಂದನ್ನು ನುಡಿದಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಜಮೀರ್ ಅಹ್ಮದ್ ಪರ ಬ್ಯಾಟ್ ಬೀಸಿದ್ದಾರೆ. ಅವರು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಜಮೀರ್ ಇಲ್ಲದೇ ಸರ್ಕಾರ ಆಗಲ್ಲ, ಜಮೀರ್ ಇದ್ದರೆ ಸರ್ಕಾರ. ಅದಕ್ಕೆ ಭಗವಂತನ ಕೃಪೆ ಇದೆ. ಅವರು ಮಾಡಿರುವ ಕೆಲಸ ಎಲ್ಲರಿಗೂ ಗೊತ್ತಿದೆ. ನಾವು ಅವರಿಗೆ ಬೆಂಬಲ ಕೊಡೋಣ, ಜಮೀರ್ ಹೆದರುವ ಅವಶ್ಯತೆ ಇಲ್ಲ, ಜಮೀರ್ ಜೊತೆ ಶಿವಲಿಂಗೇ ಗೌಡ ಕೂಡ ಮಂತ್ರಿ ಮಂಡಲ ಸೇರ್ತಾರೆ ಎಂದರು.
ಪ್ರಸ್ತುತ ರಾಜಕೀಯ ಬೆಳವಣಿಗೆಗಳ ನಡುವೆ, ಜಮೀರ್ ಅಹ್ಮದ್ ಅವರು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುಳಿವನ್ನು ಸ್ವಾಮೀಜಿಗಳು ನೀಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ಆಗಾಗ ಕುತೂಹಲಕಾರಿ ಭವಿಷ್ಯವಾಣಿಗಳನ್ನು ನುಡಿಯುವ ಕೋಡಿ ಮಠದ ಸ್ವಾಮೀಜಿಗಳ ಈ ಹೇಳಿಕೆಯು ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಜಮೀರ್ ಅಹ್ಮದ್ ಖಾನ್ ಅವರು ಮತ್ತೆ ಸಂಪುಟಕ್ಕೆ ಮರಳಲಿದ್ದಾರೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.ರಾಜ್ಯ ರಾಜಕೀಯದಲ್ಲಿ ಮುಂಬರುವ ದಿನಗಳಲ್ಲಿ ಕೆಲವು ಬದಲಾವಣೆಗಳು ಆಗಬಹುದು ಎಂಬರ್ಥದ ಮಾತುಗಳನ್ನು ಅವರು ಆಡಿದ್ದಾರೆ. ಈ ಹಿಂದೆ ಕೂಡ ಸ್ವಾಮೀಜಿಗಳ ಹಲವು ಭವಿಷ್ಯವಾಣಿಗಳು ರಾಜ್ಯದ ರಾಜಕೀಯ ವಿದ್ಯಮಾನಗಳ ಮೇಲೆ ಪ್ರಭಾವ ಬೀರಿದ್ದರಿಂದ, ಈ ಹೇಳಿಕೆಯೂ ಈಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಈ ಭವಿಷ್ಯವಾಣಿಯು ಸಚಿವ ಜಮೀರ್ ಅಹ್ಮದ್ ಅವರ ಬೆಂಬಲಿಗರಲ್ಲಿ ಉತ್ಸಾಹವನ್ನು ಮೂಡಿಸಿದ್ದರೆ, ರಾಜಕೀಯ ಪಡಸಾಲೆಯಲ್ಲಿ ಈ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

