BREAKING: ನನ್ನ ಹೇಳಿಕೆಯಿಂದ ಡ್ಯಾಮೇಜ್ ಆಗಿಲ್ಲ: ಸಚಿವ ಜಮೀರ್ ಅಹಮದ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಕರಿಯಾ ಕುಮಾರಸ್ವಾಮಿ ಎಂದು ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್ ಖಾನ್, ನನ್ನ ಹೇಳಿಕೆಯಿಂದ ಉಪ ಚುನಾವಣೆಯಲ್ಲಿ ಡ್ಯಾಮೇಜ್ ಆಗಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಬಹಳ ಸಲ ಕುಮಾರಸ್ವಾಮಿಗೆ ಆ ಮಾತು ಹೇಳಿದ್ದೇನೆ. ಆ ಮಾತನ್ನು ಮುಂಚೆಯಿಂದಲೂ ಹೇಳಿಕೊಂಡೆ ಬರುತ್ತಿದ್ದೆ. ಸಾರ್ವಜನಿಕ ಸಭೆಯಲ್ಲಿ ಹೇಳಬಾರದಿತ್ತು ಎಂದು ನನಗೂ ಅನಿಸಿತು. ಜನರು ನನ್ನ ಹೇಳಿಕೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಅನಿಸುತ್ತಿದೆ ಎಂದು ತಿಳಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್, ಕರಿಯ ಕುಮಾರಸ್ವಾಮಿ ಎಂಬುದಾಗಿ ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಜಮೀರ್ ಹೇಳಿಕೆಯಿಂದ ಹಿನ್ನಡೆ ಆಗಬಹುದೆಂದು ಕಾಂಗ್ರೆಸ್ ನಾಯಕರೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಭರ್ಜರಿ ಜಯ ಗಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಜಮೀರ್ ಅಹ್ಮದ್, ನನ್ನ ಹೇಳಿಕೆಯಿಂದ ಡ್ಯಾಮೇಜ್ ಆಗಿಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read