ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಜಮೀರ್ ಅಹ್ಮದ್ ಮಾತನಾಡಿದ್ದಾರೆ ಎಂಬ ಆಡಿಯೋ ವೈರಲ್ ಆಗಿದ್ದು, ಜಮೀರ್ ಕಾಂಗ್ರೆಸ್ ವಿರುದ್ಧವಾಗಿ ಬಿಜೆಪಿ ಪರ ಕೆಲಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವೈರಲ್ ಆಗಿರ್ವ ಆಡಿಯೊ ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.
ಜಮೀರ್ ಅಹ್ಮದ್ ಅವರ ಆಡಿಯೋ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಜಮೀರ್ ಮಾತನಾಡಿದ ಆಡಿಯೋ ಈಗ ಹೊರಬಂದಿದೆ. ಬಿಜೆಪಿಗೆ ಸಹಾಯ ಮಾಡಲು ಅವರು ಹೀಗೆ ಮಾಡಿದ್ದಾರೆ. ಅವರಿಗೆ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆಗಿದೆ ಎಂದು ಕಿಡಿಕಾರಿದ್ದಾರೆ.
ಜಮೀರ್ ಅಹಮದ್ ಮಾತನಾಡಿದ್ದು ಆಡಿಯೋ ಮೂಲಕ ಎಲ್ಲವೂ ಬಹಿರಂಗವಾಗಿದೆ. ಹೈಕಮಾಂಡ್ ನಾಯಕರು ಎಲ್ಲವನ್ನೂ ನೋಡಿದ್ದಾರೆ. ಈ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ ಎಂದರು.
ನಾನು ಅವರನ್ನು ಉಚ್ಛಾಟನೆ ಮಾಡಿ ಎನ್ನುವಂತ ಕೆಳಮಟ್ಟದ ರಾಜಕೀಯ ಮಾಡಲ್ಲ. ಹೈಕಮಾಂಡ್ ನಾಯಕರು ಈ ಬಗ್ಗೆ ತಿರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.

