ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಮುಸ್ಲಿಂ ಸಮುದಾಯ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಇದೇ ವೇಳೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿಯೂ ಜಮೀರ್ ಅಹ್ಮದ್ ಬೆಂಬಲಿಗರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಬೆಂಗಳೂರಿನ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ವಿಧಾನಸೌಧ ಚಲೋ ಹಮ್ಮಿಕೊಂಡಿದ್ದಾರೆ. ಹೋರಾಟದ ಭಾಗವಾಗಿ ವಿಧಾನಸೌಧಕ್ಕೆ ತೆರಳಲು ಮುಂದಾದ ವೇಲೆ ಭಾರಿ ಹೈದ್ರಾಮಾ ನಡೆದಿದೆ.
ಜಮೀರ್ ಅಹ್ಮದ್ ಬೆಂಬಲಿಗರಿಗೆ ಪೊಲೀಸರು ತಡೆ ಹಿಡಿದಿದ್ದರಿಂದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಳಿಕ ಅಲರ್ಟ್ ಆದ ಪೊಲೀಸರು, ಜಮೀರ್ ಅಹಮ್ಮದ್ ಖಾನ್ ಬೆಂಬಲಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

