HomeKarnatakaBIG NEWS: ಜಿಪಂ, ತಾಪಂ ಮೀಸಲಾತಿ ನಿಗದಿಗೆ ಮತ್ತೆ ಮೂರು ವಾರ ಅವಕಾಶ ನೀಡಿದ ಹೈಕೋರ್ಟ್

BIG NEWS: ಜಿಪಂ, ತಾಪಂ ಮೀಸಲಾತಿ ನಿಗದಿಗೆ ಮತ್ತೆ ಮೂರು ವಾರ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ಪುನಃ 3 ವಾರ ಕಾಲಾವಕಾಶ ನೀಡಲಾಗಿದೆ.

ಕೋರ್ಟ್ ಗೆ ಭರವಸೆ ನೀಡಿದ ಹೊರತಾಗಿಯೂ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಇದರೊಂದಿಗೆ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕ ಸದಸ್ಯ ನ್ಯಾಯಪೀಠ ನೀಡಿದ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಮತ್ತೊಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಗಳ ವಿಚಾರಣೆ ಗುರುವಾರ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದು, ಜಿಪಂ, ತಾಪಂ ಕ್ಷೇತ್ರಗಳ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಮತ್ತೆ ಮೂರು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular